ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ (ನಿ)

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಲ್ಲಿ

ಅರಿವು ಶೈಕ್ಷಣಿಕ ಸಾಲ ಯೋಜನೆಯ ಅನುಷ್ಠಾನದ ಮಾರ್ಗಸೂಚಿಗಳು

ಈ ಯೋಜನೆಯಲ್ಲಿ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಇತ್ಯಾದಿ ವೃತ್ತಿಪರ ಪದವಿ, ಸ್ಮಾತಕೋತ್ತರ ಪದವಿ ಮತ್ತು ಪಿ.ಎಚ್.ಡಿ., ಕೋರ್ಸ್ಗಳಲ್ಲಿ ಸಿ..ಟಿ. ಮೂಲಕ ಆಯ್ಕೆಯಾಗಿ ವ್ಯಾಸಂಗ ಮಡುವ ಆರ್ಯ ವೈಶ್ಯ ಸಮುದಾಯದ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ. 2ರ ಬಡ್ಡಿದರದಲ್ಲಿ ವಾರ್ಷಿಕ ಗರಿಷ್ಠ ರೂ.1,00,000/-ಗಳ ಶೈಕ್ಷಣಿಕ ಸಾಲವನ್ನು ಮಂಜೂರು ಮಾಡುವುದು.

1

ಅರ್ಹತೆ:

ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿಬೇಕು.

2

ಆದಾಯ ಮಿತಿ:

ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು.

3

ವಯೋಮಿತಿ:

ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದೊಳಗಿನವರಾಗಿರಬೇಕು.

4

ವಿಳಾಸ:

ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಲು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು.

5

ಮಹಿಳೆಯರ ಮೀಸಲಾತಿ:

ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಶೇ.33ರಷ್ಟು ಮಹಿಳಾ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು.

6

ಅಂಗವಿಕಲರ ಮೀಸಲಾತಿ:

ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಶೇ.5ರಷ್ಟು ಅಂಗವಿಕಲ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು.

7

ಒಂದು ಕುಟುಂಬದಲ್ಲಿ ಎರಡು ವಿದ್ಯಾರ್ಥಿಗಳನ್ನು ಮಾತ್ರ ಆಯ್ಕೆ ಮಾಡಬೇಕು.

.

ಫೀ ಸ್ಟ್ರಕ್ಟರ್:

ಕರ್ನಾಟಕ ಪರೀಕ್ಷಾ ಪ್ರಾಧಿಕಾರರವರಿಂದ ನಿಗದಿಪಡಿಸಿರುವ ಸಿ..ಟಿ. ಫೀಯನ್ನು ಮತ್ತು ಪ್ರವೇಶ ಶುಲ್ಕ, ಟ್ಯೂಷನ್ ಫೀ, ಹಾಸ್ಟೆಲ್ ಫೀ, ಪುಸ್ತಕ, ಲ್ಯಾಪ್ಟಾಪ್, ಪರೀಕ್ಷಾ ಶುಲ್ಕ ಇತ್ಯಾದಿ ಫೀಗಳನ್ನು ವಾರ್ಷಿಕ ರೂ.1,00,000/-ಗಳ ಮಿತಿಯೊಳಗೆ ಸಾಲ ನೀಡುವುದು. ಸಿ..ಟಿ. ಮುಖಾಂತರ ಆಯ್ಕೆಯಾಗಿರುವ ಕಾಲೇಜಿನ ಪ್ರಾಂಶುಪಾಲರಿಂದ ಧೃಡೀಕರಿಸಿ ನೀಡಿರುವ ಫೀ ಸ್ಟ್ರಕ್ಟರ್ ಅನ್ವಯ ಸಾಲ ನೀಡಬೇಕಾಗಿದೆ.

.

ಹಾಸ್ಟೆಲ್ ಫೀ :

ವಿದ್ಯಾರ್ಥಿಯ ವ್ಯಾಸಂಗ ಮಾಡುತ್ತಿರುವ ಕಾಲೇಜಿನಲ್ಲೇ ಹಾಸ್ಟೆಲ್ ಸೌಲಭ್ಯ ಪಡೆದಿದ್ದಲ್ಲಿ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರ ದೃಢೀಕರಣ ಪತ್ರ ಹಾಗೂ ಜಿಲ್ಲಾ ವ್ಯವಸ್ಥಾಪಕರ ತಪಾಸಣ ವರದಿಯ ಮೇರೆಗೆ ಹಾಸ್ಟೆಲ್ ಫೀ ನೀಡುವುದು.

8

ಆಯ್ಕೆ ವಿಧಾನ:

ಈ ಯೋಜನೆಯಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಕೆಳಕಂಡಂತೆ

 

ಮುಖ್ಯಕಾರ್ಯನಿರ್ವಾಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ವಿವರ

ಕ್ರ. ಸಂ.

ಅಧಿಕಾರಿಗಳು

ಪದನಾಮ

1

ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪಂಚಾಯತ್ ಲೀಡ್ ಬ್ಯಾಂಕ್ ವ್ಯವಸ್ಥಾಪಕರು       

ಅಧ್ಯಕ್ಷರು

2

ಲೀಡ್ ಬ್ಯಾಂಕ್ ವ್ಯವಸ್ಥಾಪಕರು       

ಸದಸ್ಯರು

3

ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

ಸದಸ್ಯರು

4

ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ          

ಸದಸ್ಯರು

5

ಪ್ರಧಾನ ವ್ಯವಸ್ಥಾಪಕರು, ಜಿಲ್ಲಾ ಕೈಗಾರಿಕಾ ಕೇಂದ್ರ ಸದಸ್ಯರು       

ಸದಸ್ಯರು

6

ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ

ಸದಸ್ಯರು

7

ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ / ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಸದಸ್ಯರು

ಕಾರ್ಯದರ್ಶಿ

 

09

ಸಾಲದ ಮರುಪಾವತಿ ಅವಧಿ:

ಈ ಯೋಜನೆ ಅಡಿಯಲ್ಲಿ ಪಡೆದ ಸಾಲವನ್ನು 3 ವರ್ಷಗಳ ಅವಧಿಯಲ್ಲಿ 36 ಮಾಸಿಕ ಕಂತುಗಳಲ್ಲಿ ಅಸಲು ಮತ್ತು ಬಡ್ಡಿ ಸೇರಿಸಿ ಮರುಪಾವತಿಸಬೇಕು ವಿದ್ಯಾರ್ಥಿಯು ವ್ಯಾಸಂಗ ಪೂರ್ಣಗೊಂಡ 4ನೇ ತಿಂಗಳಿಂದ ಮರು ಪಾವತಿಸಬೇಕು. 4 ತಿಂಗಳ ವಿರಾಮ ಅವಧಿ ಇರುತ್ತದೆ.

10

ಅರ್ಜಿದಾರರು ಆಧಾರ್ ಕಾರ್ಡ್ ಹೊಂದಿರಬೇಕು.