ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ (ನಿ)

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ

ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯ ಅನುಷ್ಠಾನಕ್ಕೆ ಮಾರ್ಗಸೂಚಿಗಳು

 


                       ಈ ಯೋಜನೆಯಲ್ಲಿ ಆರ್ಯ ವೈಶ್ಯ ಸಮುದಾಯದವರಿಗೆ ಸೇರಿದ ಅರ್ಜಿದಾರರು ಸ್ವಯಂ ಉದ್ಯೋಗ ಕೈಗೊಳ್ಳಲು ಸಾಂಪ್ರದಾಯಿಕ ವೃತ್ತಿಗಳಲ್ಲದೆ ಇತರೆ ವೃತ್ತಿಗಳಾದ ಹಸು ಸಾಕಾಣಿಕೆ, ವ್ಯಾಪಾರ ಚಟುವಟಿಕೆಗಳು, ಸೇವಾ ಚಟುವಟಿಕೆಗಳು, ಕೈಗಾರಿಕೆ ಚಟುವಟಿಕೆಗಳು, ಇತ್ಯಾದಿ ಚಟುವಟಿಕೆಗಳನ್ನು ಕೈಗೊಳ್ಳಲು ನಿಗಮದಲ್ಲಿ ಈ ಯೋಜನೆಯಲ್ಲಿ ಗರಿಷ್ಠ ರೂ.1,00,000/-ಗಳ ಅರ್ಥಿಕ ನೆರವು ಒದಗಿಸಲು ಹಾಗೂ ಈ ಮೊತ್ತದಲ್ಲಿ ಶೇ.20ರಷ್ಟು ಗರಿಷ್ಠ ರೂ.20,000/-ಗಳ ಸಹಾಯಧನ, ಬಾಕಿ ಉಳಿಕೆ ಮೊತ್ತವಾದ ಶೇ.80 ರಷ್ಟು ಗರಿಷ್ಠ ರೂ.80,000/-ಗಳ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡುವುದು.

                        ಈ ಯೋಜನೆಯಡಿಯಲ್ಲಿ ಘಟಕ ವೆಚ್ಚವು ಕನಿಷ್ಠ ರೂ.50,000/-ಗಳು ಹಾಗೂ ಈ ಮೊತ್ತಕ್ಕೆ ಸಹಾಯಧನವು ಕನಿಷ್ಠ ಶೇ.20ರಷ್ಟು ಅಂದರೆ ರೂ.10,000/-ಗಳು ಹಾಗೂ ಬಾಕಿ ಮೊತ್ತವಾದ ರೂ.40,000/-ಗಳಿಗೆ ಶೇ.4ರ ಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡುವುದು.

 

1

ಅರ್ಹತೆ:

ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು.

2

ಆದಾಯ ಮಿತಿ:

ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ. 3,00,000/-ಗಳ ಮಿತಿ ಒಳಗಿರಬೇಕು.

3

ವಯೋಮಿತಿ:

ಅರ್ಜಿದಾರರು 18 ವರ್ಷ ಮೇಲ್ಪಟ್ಟು 45 ವರ್ಷದೊಳಗಿನವರಾಗಿರಬೇಕು.

4

ವಿಳಾಸ:

ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಲು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು.

5

ಮಹಿಳೆಯರ ಮೀಸಲಾತಿ:

ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಶೇ.33ರಷ್ಟು ಮಹಿಳಾ ಫಲಾನುಭವಿಗಳನ್ನು ಆಯ್ಕೆ ಮಾಡುವುದು. ಮಹಿಳೆಯರ ಮೀಸಲಾತಿ ಅಡಿಯಲ್ಲಿ ಶೇ.50ರಷ್ಟು ವಿಧವೆಯರು ಮತ್ತು ವಿಚ್ಛೇದನೆಯಾಗಿರುವ ಮಹಿಳಾ ಫಲಾನುಭವಿಗಳನ್ನು ಆಯ್ಕೆ ಮಾಡಬೇಕಾಗಿರುತ್ತದೆ.

6

ಅಂಗವಿಕಲರ ಮೀಸಲಾತಿ:

ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಶೇ.5ರಷ್ಟು ಅಂಗವಿಕಲ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು.

7

 

ಒಂದು ಕುಟುಂಬದಲ್ಲಿ ಒಂದು ಫಲಾನುಭವಿಯನ್ನು ಮಾತ್ರ ಆಯ್ಕೆ ಮಾಡಬೇಕಾಗಿರುತ್ತದೆ.

8

ಆಯ್ಕೆ ವಿಧಾನ:

ಈ ಯೋಜನೆಯಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಈ ಕೆಳಕಂಡಂತೆ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡಬೇಕಾಗಿರುತ್ತದೆ.

ಮುಖ್ಯಕಾರ್ಯನಿರ್ವಾಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ವಿವರ

1

ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪಂಚಾಯತ್ 

ಅಧ್ಯಕ್ಷರು

2

ಲೀಡ್ ಬ್ಯಾಂಕ್ ವ್ಯವಸ್ಥಾಪಕರು       

ಸದಸ್ಯರು

3

ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ          

ಸದಸ್ಯರು

4

ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ          

ಸದಸ್ಯರು

5

ಪ್ರಧಾನ ವ್ಯವಸ್ಥಾಪಕರು, ಜಿಲ್ಲಾ ಕೈಗಾರಿಕಾ ಕೇಂದ್ರ

   ಸದಸ್ಯರು    

6

ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ     

ಸದಸ್ಯರು

7

ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ / ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ      

 

    ಸದಸ್ಯರು

ಕಾರ್ಯದರ್ಶಿ

9

ಸಾಲದ ಮರುಪಾವತಿ ಅವಧಿ:

ಈ ಯೋಜನೆ ಅಡಿಯಲ್ಲಿ ಪಡೆದ ಸಾಲವನ್ನು 3 ವರ್ಷಗಳ ಅವಧಿಯಲ್ಲಿ 34 ಮಾಸಿಕ ಕಂತುಗಳಲ್ಲಿ ಅಸಲು ಮತ್ತು ಬಡ್ಡಿ ಸೇರಿಸಿ ಮರುಪಾವತಿಸಬೇಕು ಹಾಗೂ ಇದರಲ್ಲಿ 2 ತಿಂಗಳು ವಿರಾಮ ಅವಧಿ ಇರುತ್ತದೆ.

10

 

ಅರ್ಜಿದಾರರು ಆಧಾರ್ ಕಾರ್ಡ್ ಹೊಂದಿರಬೇಕು.